ವಂಚನೆ ಆರೋಪ ಪ್ರಕರಣ : ಮೈಸೂರಿನಲ್ಲಿ ಸ್ಯಾಂಟ್ರೊ ರವಿ ಆಪ್ತ ಪೊಲೀಸ್ ವಶಕ್ಕೆ
ಮೈಸೂರು : ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ಪ್ರಕರಣ ತಾರಕಕ್ಕೇರಿರುವಂತೆಯೇ ಮೈಸೂರಿನಲ್ಲಿ ಸ್ಯಾಂಟ್ರೋ ರವಿ ಆಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಲ್ಲಿ ವಿಶೇಷ ಪೊಲೀಸ್ ತಂಡದಿಂದ ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಲಾಗಿದ್ದು, ಸದ್ಯಕ್ಕೆ ಪೊಲೀಸರು ಸ್ಯಾಂಟ್ರೊ ರವಿ ಆಪ್ತನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳೆಗೆ ವಂಚನೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಉದ್ಯಮಿ ಸ್ಯಾಂಟ್ರೋ ರವಿ ಆಪ್ತನನ್ನು ವಿಶೇಷ ಪೊಲೀಸ್ ತಂಡ ಬಂಧಿಸಲಾಗಿದೆ.ಮಹಿಳೆಗೆ ಮತ್ತು ಬರಿಸುವ ಔಷಧಿ ಬೆರೆಸಿದ್ದ ಆರೋಪದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಪೊಲಿಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.