ವಯೋಸಹಜ ಕಾಯಿಲೆಯಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಹೊನ್ನಪ್ಪ ಇನ್ನಿಲ್ಲ

ವಯೋಸಹಜ ಕಾಯಿಲೆಯಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಹೊನ್ನಪ್ಪ ಇನ್ನಿಲ್ಲ

ಮಂಡ್ಯ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಹೊನ್ನಪ್ಪ ನಿಧನ ಹೊಂದಿದ್ದಾರೆ. ಇಂದು ಬೆಳಗ್ಗಿನ ಜಾವ ಅವರು ನಿಧನರಾಗಿದ್ದಾರೆ.

ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದವರಾಗಿದ್ದಾರೆ.

1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಇಂದು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ತಮ್ಮ ಹುಟ್ಟೂರಾದ ಇಂಡುವಾಳು ಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.