ವರುಣ ಕ್ಷೇತ್ರದಿಂದ ಸಿದ್ದು ಸ್ಪರ್ಧೆ?; ಜನರ ಸಮಸ್ಯೆ ಆಲಿಸುತ್ತಿರುವ ಪುತ್ರ ಯತೀಂದ್ರ

ಮೈಸೂರು: ಮುಂದಿನ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸಿದ್ದು ಸ್ಪರ್ಧೆ ಸಾಧ್ಯತೆ ಹಿನ್ನೆಲೆ ತಂದೆ ಆಗಮನದಿಂದಾಗಿ ಪುತ್ರ ಡಾ.ಯತೀಂದ್ರ ಫುಲ್ ಅಲರ್ಟ್ ಆಗಿದ್ದಾರೆ. ಶಾಸಕ ಯತೀಂದ್ರ ಕ್ಷೇತ್ರದಲ್ಲೇ ಬೀಡು ಬಿಟ್ಟಿದ್ದಾರೆ. ಪ್ರತಿದಿನ ಕ್ಷೇತ್ರದಲ್ಲಿ ಸಂಚರಿಸಿ ಜನರ ಅಹವಾಲು ಆಲಿಸುತ್ತಿದ್ದಾರೆ. ನಂಜನಗೂಡು ತಾ| ವರುಣ ವಿಧಾನಸಭಾ ಕ್ಷೇತ್ರದ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೈತರ ಸಮಸ್ಯೆ ಆಲಿಸಿದ್ದಾರೆ. ಅಲ್ಲದೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸಮಸ್ಯೆಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.