ರಾಜ್ಯದ 530 ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ' ಶಿಕ್ಷಣ ಆರಂಭ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ರಾಜ್ಯದ 530 ವಸತಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪಿಯುಸಿ' ಶಿಕ್ಷಣ ಆರಂಭ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯದ ವಸತಿ ಶಾಲೆಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ರಿಂದ 10 ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗೆ ವಿಸ್ತರಿಸುವ ಉದ್ದೇಶದಿಂದ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.