ವಾಯುಭಾರ ಕುಸಿತ : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ

ವಾಯುಭಾರ ಕುಸಿತ : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಡಿ.27) ಮತ್ತು ನಾಳೆ (ಡಿ.28) ರಂದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ..ಇನ್ನೂ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮತ್ತು ನಾಳೆಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ.