ವಾಹನ ಮಾಲೀಕ'ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..!

ಬೆಂಗಳೂರು : ರಾಜ್ಯ ಸರ್ಕಾರದಿಂದ ಈಗಾಗಲೇ ವಾಹನ ಮಾಲೀಕರಿಗೆ ಲಾಕ್ ಡೌನ್ ಸಂಕಷ್ಟದಿಂದಾಗಿ ತೆರಿಗೆ ಪಾವತಿಯ ಅವಧಿಯನ್ನು ಜೂನ್.15ರವರೆಗೆ ವಿಸ್ತರಣೆ ಮಾಡಿತ್ತು. ಇಂತಹ ತೆರಿಗೆ ಪಾವತಿಯ ಅವಧಿಯನ್ನು ಮತ್ತೆ ಜೂನ್.30ರವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದ್ದು, ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕೋವಿಡ್-19 ರ 2ನೇ ಅಲೆ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ಕಲಂ 4 (1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ದಿನಾಂಕ 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.