ವಾಹನ ಸವಾರರಿಗೆ ಬಿಗ್ ರಿಲೀಫ್ , ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ ಆದೇಶ ವಾಪಸ್

ವಾಹನ ಸವಾರರಿಗೆ ಬಿಗ್ ರಿಲೀಫ್ , ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ ಆದೇಶ ವಾಪಸ್

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಆರಂಭವಾಗಿ 17 ದಿನದಲ್ಲೇ ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು, ಈ ಹಿನ್ನೆಲೆ ಸಾರ್ವಜನಿಕರಿಂದ ತೀವ್ರ ಆಕ್ರೋಶವಾಗಿತ್ತು. ಈ ಬೆನ್ನಲ್ಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆದಿದೆ.

ಹೌದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಟೋಲ್ ಮೊತ್ತ ಹೆಚ್ಚಿಸಲು ಹೆದ್ದಾರಿ ಸಚಿವಾಲಯ ನಿರ್ಧರಿಸಿತ್ತು, ಇಂದಿನಿಂದ ಟೋಲ್ ದರದಲ್ಲಿ ಶೇ.22ರಷ್ಟು ಹೆಚ್ಚಳ ಮಾಡಿ ಆದೇಶಿಸಿತ್ತು. ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆದಿದೆ.

ಹೆದ್ದಾರಿ ಓಪನ್ ಆದ ದಿನದಿಂದಲೂ ಸುದ್ದಿಯಾಗಿದ್ದ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳ ಮಾಡಿದ್ದು, ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿತ್ತು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ತಕ್ತವಾದ ಬೆನ್ನಲ್ಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆದಿದೆ.

ಕೊಪ್ಪಳದಲ್ಲಿ ದಾಖಲೆಯಿಲ್ಲದ ಬೆಳ್ಳಿ, ಹಣ ಜಪ್ತಿ

ಕೊಪ್ಪಳ : ಜಿಲ್ಲೆಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆಯಿಲ್ಲದ ಬೆಳ್ಳಿ, ಹಣ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ.ಚುನಾವಣೆ ಹತ್ತಿರವಾಗುತ್ತಿದ್ದಂತೆ ನಗರದೆಲ್ಲೆಡೆ ಚೆಕ್ ಪೋಸ್ಟ್ ನಿರ್ಮಿಸಿ, ರಸ್ತೆಯಲ್ಲಿ ಓಡಾಡುವ ವಾಹವನ್ನು ತಡೆದು ಪರಿಶೀಲನೆ ನಡೆಸಲಾಗುತಿದ್ದು, ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಬೆಳ್ಳಿ, ಹಣ ಜಪ್ತಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಸುಮಾರು 9.67 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ವಸ್ತು ಸೇರಿ 1.10 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದೆ. ಉದ್ಯಮಿಗಳಾದ ಕೈಲಾಸ್ ಜೈನ್, ದೇವಿಚಂದ್ರ ಜೈನ್ ಎಂಬುವವರು ಹುಬ್ಬಳ್ಳಿಯಿಂದ ಕೊಪ್ಪಳಕ್ಕೆ ಬೆಳ್ಳಿ, ಹಣ ತೆಗೆದುಕೊಂಡು ಬರುತ್ತಿದ್ದರು . ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಇಬ್ಬರನ್ನ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.