ವಾಹನ ಸವಾರರಿಗೆ ಬಿಗ್‌ ಶಾಕ್‌.! ಈ ನಗರಗಳಲ್ಲಿ ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ

ವಾಹನ ಸವಾರರಿಗೆ ಬಿಗ್‌ ಶಾಕ್‌.! ಈ ನಗರಗಳಲ್ಲಿ ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ

ವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ (Petrol, diesel) ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆಯಲ್ಲಿ ಕೊಂಚ ಏರಿಕೆ ಕಾಣಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ (Fuel Price) ಇಂದು ಶನಿವಾರ ತುಸು ಇಳಿಕೆ ಕಂಡಿದೆ.

ಬ್ರೆಂಟ್ ಕಚ್ಚಾ ತೈಲ ಇಂದು ಬೆಳಿಗ್ಗೆ ಪ್ರತಿ ಬ್ಯಾರೆಲ್‌ಗೆ 1.14 ಡಾಲರ್ ಕಡಿಮೆಯಾಗಿ 86.33 ಡಾಲರ್​​ಗೆ ಇಳಿದಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್​ಗೆ 1.33 ಡಾಲರ್ ಕಡಿಮೆಯಾಗಿ 79.68 ಡಾಲರ್​ಗೆ ಕುಸಿದಿದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಹುತೇಕ ಯಥಾಸ್ಥಿತಿಯಲ್ಲಿದೆ. ಮೈಸೂರು, ಪುಣೆ, ರಾಂಚಿ, ಚೆನ್ನೈ, ನಾಗಪುರ, ಪಾಟ್ನಾ ಮೊದಲಾದ ಕೆಲ ನಗರಗಳಲ್ಲಿ ಪೆಟ್ರೋಲ್ ಬೆಲೆ ತುಸು ಏರಿಕೆ ಕಂಡಿದೆ. ಅಹ್ಮದಾಬಾದ್​ನಲ್ಲಿ ಗರಿಷ್ಠ 68 ಪೈಸೆಯಷ್ಟು ಏರಿಕೆಯಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗುತ್ತದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ನೋಯ್ಡಾ, ಕಾನ್ಪುರ, ಆಗ್ರಾ, ಘಾಜಿಯಾಬಾದ್, ವಿಶಾಖಪಟ್ಟಣಂ ಮೊದಲಾದ ಕೆಲವೇ ನಗರಗಳಲ್ಲಿ ಅಲ್ಪ ಪ್ರಮಾಣದಲ್ಲಿ ಬೆಲೆ ಇಳಿಕೆಯಾಗಿದೆ. ಉಳಿದಂತೆ ಬೆಂಗಳೂರು ಸೇರಿ ಬಹುತೇಕ ಕಡೆ ಪೆಟ್ರೋಲ್ ಬೆಲೆ ಯಥಾಸ್ಥಿತಿಯಲ್ಲಿದೆ.

ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ 101.94 ರೂಪಾಯಿ ಇದೆ. ಡೀಸೆಲ್ ಬೆಲೆ ಲೀಟರ್​ಗೆ 87.89 ರೂ ಇದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಬೆಲೆ 89.62 ರೂ. ಆಗಿದೆ, ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ. ಆಗಿದೆ

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ 94.24 ರೂ. ಆಗಿದೆ, ಕೊಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ.

ನೊಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.65 ರೂ. ಮತ್ತು ಡೀಸೆಲ್ ಬೆಲೆ 89.82 ರೂ. ಆಗಿದೆ, ಘಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.58 ರೂ. ಮತ್ತು ಡೀಸೆಲ್ ಬೆಲೆ 89.75 ರೂ. ಆಗಿದೆ.

ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 107.24 ರೂ. ಮತ್ತು ಡೀಸೆಲ್ 94.86 ರೂ. ಆಗಿದೆ, ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 107.71 ರೂ. ಮತ್ತು ಡೀಸೆಲ್ ಬೆಲೆ 97.98 ರೂ. ಆಗಿದೆ, ಹೈದರಾಬಾದ್​ನಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 109.66 ರೂ ಮತ್ತು ಡೀಸೆಲ್ ಬೆಲೆ 97.82 ರೂ ಆಗಿದೆ. ಮುಂದಿನ ದಿನಗಳಲ್ಲಿ ಇನ್ನೆಷ್ಟು ಬೆಲೆ ಏರಿಕೆಯಾಗಲಿದೆ ಅನ್ನೋದನ್ನು ಕಾದು ನೋಡಬೇಕಾಗಿದೆ.