ವಿಜಯಪುರದಲ್ಲಿ ' ಕೈ ' ನಾಯಕ ಎಸ್.ಆರ್. ಪಾಟೀಲ್ ಫೋಟೋ ಇರುವ 'ಗಡಿಯಾರ ಗಿಫ್ಟ್ಗಳು ಪತ್ತೆ'
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್ಲ ಮದರಿ ಬಳಿಯ ಬಾಲಾಜಿ ಸಕ್ಕರೆ ಕಾರ್ಖಾನೆ ಗೋಡೌನ್ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ್ ಭಾವಚಿತ್ರ ಇರುವ ರಾಶಿ ರಾಶಿ ಗಿಫ್ಟ್ಗಳು ಪತ್ತೆಯಾಗಿದೆ.
ಮತದಾರರ ಸೆಳೆಯೋದಕ್ಕೆ ರಾಜ್ಯದಲ್ಲಿ ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯಾದ್ಯಂತ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಅದರಲ್ಲೂಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಸ್.ಆರ್. ಪಾಟೀಲ್ ಭಾವಚಿತ್ರ ಇರುವ ರಾಶಿ ರಾಶಿ ಗಡಿಯಾರಗಳು ಹಾಗೂ ಟೀ ಶರ್ಟ್ಗಳು ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಡಿಸಿ ವಿಜಯಮಹಾಂತೇಶ ದಾನಮ್ಮನವರ್ ಹಾಗೂ ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದಿದ್ದಾರೆ. ಮುದ್ದೇಬಿಹಾಳ ಚುನಾವಣಾಧಿಕಾರಿ ಪವಾರ್, ಸೆಕ್ಟರ್ ಅಧಿಕಾರಿ ಸುರೇಶ ಬಾವಿಕಟ್ಟಿ ನೇತೃತ್ವದಲ್ಲಿ ದಾಳಿ ನಡೆಸಿದ್ದು. ಸ್ಥಳಕ್ಕೆ ಮುದ್ದೇಬಿಹಾಳ ತಹಶೀಲ್ದಾರ್ ರೇಖಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 5 ರಿಂದ 6 ಗೋಡೌನ್ಗಳಲ್ಲಿ ಗಿಫ್ಟ್ಗಳನ್ನ ಸಂಗ್ರಹಿಸಿರುವ ಶಂಕಿಸಲಾಗುತ್ತಿದೆ.