ವಿಜಯಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಇಬ್ಬರು ಶಿಕ್ಷಕರು ಸಸ್ಪೆಂಡ್

ವಿಜಯಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಇಬ್ಬರು ಶಿಕ್ಷಕರು ಸಸ್ಪೆಂಡ್

ವಿಜಯಪುರ : ವಿಜಯಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಇಬ್ಬರು ಶಿಕ್ಷಕರನ್ನು ಚುನಾವಣಾಧಿಕಾರಿಗಳು ಅಮಾನತು ಮಾಡಿದ್ದಾರೆ.

ವಿಜಯಪುರ ಜಿಲ್ಲೆ ಬರಟಗಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗೆ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಲ್ಲಾಭಕ್ಷಿ ಅವರನ್ನು ಅಮಾನತು ಮಾಡಲಾಗಿದೆ.

ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಈ ಆದೇಶ ಹೊರಡಿಸಿದ್ದಾರೆ. ಕರ್ತವ್ಯಕ್ಕೆ ಹಾಜರಾಗದೇ ಕರ್ತವ್ಯಲೋಪ ಎಸಗಿದ ಹಿನ್ನೆಲೆ ವಿಚಾರಣೆ ಬಾಕಿ ಉಳಿಸಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿ ; ದೇವಸ್ಥಾನ, ಇತರೆ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳು ನಿರ್ಬಂಧ

ಬಳ್ಳಾರಿ : ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ-2023ರ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ನಿಟ್ಟಿನಲ್ಲಿ, ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಮಠ, ಮಂದಿರ, ಜೈನ್ ಬಸದಿಗಳಲ್ಲಿ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಸಮುದಾಯ ಭವನ, ಯಾತ್ರಿನಿವಾಸ ಪ್ರದೇಶ, ಕಲ್ಯಾಣ ಮಂಟಪ ಜಾಗ ಪ್ರದೇಶದಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಎಂ.ಹೆಚ್.ಪ್ರಕಾಶ್ ಅವರು ತಿಳಿಸಿದ್ದಾರೆ.

ರಾಜಕೀಯ ಚಟುವಟಿಕೆಗಳಿಗೆ ದೇವಸ್ಥಾನದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯ ಭವನ, ಖಾಲಿ ಜಾಗ, ದೇವಸ್ಥಾನದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ. ದೇವಸ್ಥಾನದಲ್ಲಿ ರಾಜಕೀಯ ವ್ಯಕ್ತಿಗಳು ಯಾವುದೇ ಸಮಾರಂಭ, ಸಭೆ, ಇನ್ನಿತರ ರಾಜಕೀಯ ಚಟುವಟಿಕೆಗಳು ನಡೆಸಲು ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣದಲ್ಲಿ ರಾಜಕೀಯ ವ್ಯಕ್ತಿಗಳಿಂದ ಅನವಶ್ಯಕ ಕಾರ್ಯಕ್ರಮವನ್ನು ಆಯೋಜಿಸಿ ಊಟದ ವ್ಯವಸ್ಥೆಯನ್ನು ಮಾಡಿ ಹಂಚುವುದಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ.ಚುನಾವಣೆ ಸಂಧರ್ಭದಲ್ಲಿ ರಾಜಕೀಯ ವ್ಯಕ್ತಿಗಳ ವ್ಯಕ್ತಿಗಳು ತಮ್ಮ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇತರೆ ಧಾರ್ಮಿಕ ಸ್ಥಳಗಳಲ್ಲಿ ಭೇಟಿ ನೀಡಿ ಆವರಣದಲ್ಲಿ ಸಭೆ ಸಮಾರಂಭ ಅಥವಾ ಇನ್ನಿತರೆ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ.