ವಿಜಯಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ
ವಿಜಯಪುರ : ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇಬಾಡಿ ತಾಲೂಕಿನ ಜೈನಾಪೂರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಅರ್ಜುನ ಅಂಗಡಿ (23) ಹಾಗೂ ಸಾವಿತ್ರಿ ಮಲ್ಲಪ್ಪ ಅಂಬಲಿ ಎಂದು ಗುರುತಿಸಲಾಗಿದೆ.
ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದಾರೆ . ನಂತರ ಪೋಷಕರು ಬಹಳ ಹುಡುಕಾಡಿದ್ದರು ಎನ್ನಲಾಗಿದೆ. ಬಳಿಕ ವಿಷಯ ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.