ವಿಡಿಯೋ ಕಾಲ್ ಮಾಡಿ ಪತ್ನಿ ತೋರಿಸಲಿಲ್ಲ ಎಂದು ಸಹೋದ್ಯೋಗಿಗೆ ಚಾಕು ಇರಿತ..!
ಬೆಂಗಳೂರು: ವಿಡಿಯೋ ಕಾಲ್ (Video Call) ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಸ್ನೇಹಿತನಿಗೆ ಚಾಕು ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಲೆನಿನ್ ಕಲೆಕ್ಷನ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ತನ್ನ ಪತ್ನಿಯೊಂದಿಗೆ ಫೋನ್‌ನಲ್ಲಿ ಮಾತಾಡುತ್ತಿದ್ದ.
ಇದರಿಂದ ಕೋಪಗೊಂಡ ರಾಜೇಶ್ ಮಿಶ್ರಾ, ಸುರೇಶ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾನೆ. ಮಾತು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸುರೇಶ್ ರಾಜೇಶ್ ಮಿಶ್ರಾಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಜೇಶ್ ಮಿಶ್ರಾನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಆರೋಪಿ ಸುರೇಶ್ ನನ್ನ ಬಂಧಿಸಿದ್ದಾರೆ.