ವಿದೇಶದಿಂದ ಬೆಂಗಳೂರಿಗೆ ಬಂದ ನಾಲ್ವರಿಗೆ ಕೊರೊನಾ ಸೋಂಕು ದೃಢ : ಸೋಂಕಿತರ ಸಂಖ್ಯೆ 16 ಕ್ಕೆ ಏರಿಕೆ

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಕೋವಿಡ್ ಆತಂಕ ಹೆಚ್ಚುತ್ತಿದೆ. ವಿದೇಶದಿಂದ ಬೆಂಗಳೂರಿಗೆ ಆಗಮಿಸಿರುವ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ವಿವಿಧ ದೇಶಗಳಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 119 ಪ್ರಯಾಣಿಕರ ರ್ಯಾಂಡಮ್ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕಳೆದ 3 ದಿನಗಳಿಂದ ವಿದೇಶಗಳಿಂದ ಬೆಂಗಳೂರಿಗೆ ಬಂದ 16 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ರೂಪಾಂತರಿ ಪತ್ತೆಹಚ್ಚಲು ಎಲ್ಲಾ 4 ಸೋಂಕಿತರ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟಾರೆ ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿದ್ದು, BF.7 ವೈರಸ್ ಆತಂಕಕ್ಕೂ ಇಮ್ಮಡಿಗೊಂಡಿದೆ.