ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿ ದೇಶಭಕ್ತನಾಗುವುದಿಲ್ಲ; ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿ ದೇಶಭಕ್ತನಾಗುವುದಿಲ್ಲ; ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಮೋದಿ' ಉಪನಾಮದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆ ಅವರಿಗೆ ಈಗ ಸಂಕಷ್ಟ ತಂದೊಡ್ಡಿದೆ. ಸೂರತ್ ನ್ಯಾಯಾಲಯದಿಂದ ರಾಹುಲ್ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಇದಕ್ಕೆ ಈಗ ಜಾಮೀನು ದೊರೆತಿದೆ.

ಎರಡು ವರ್ಷಗಳ ಜೈಲು ಶಿಕ್ಷೆಗೆ ರಾಹುಲ್ ಗುರಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದು, ಇದರ ಜೊತೆಗೆ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ.

ಇದರ ಮಧ್ಯೆ ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್, ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿ ಎಂದಿಗೂ ದೇಶಭಕ್ತನಾಗುವುದಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿಯವರ ಕುರಿತು ಪರೋಕ್ಷವಾಗಿ ನೀಡಿರುವ ಅವರ ಈ ಹೇಳಿಕೆ ಈಗ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ.