ವಿದ್ಯಾಕಾಶಿಲ್ಲಿ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್: ಪರದಾಡುತ್ತಿರುವ ವಿದ್ಯಾರ್ಥಿಗಳು

ವಿದ್ಯಾಕಾಶಿಲ್ಲಿ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್: ಪರದಾಡುತ್ತಿರುವ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಹೋರಾಡುತ್ತಿದ್ದಾರೆ. ಇಲ್ಲಿಗೆ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಹೀಗೆ ಬರುವ ವಿದ್ಯಾರ್ಥಿಗಳ ಪೈಕಿ ಬಹುತೇಕ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗದದವರೇ ಆಗಿರುತ್ತಾರೆ. ಹೀಗಾಗಿ ಜಿಲ್ಲೆಯಲ್ಲಿ ಲಭ್ಯವಿರುವ ಹಾಸ್ಟೆಲ್​ಗಳು ತಮಗೆ ಸಾಲುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ, ಡಿಸಿ ಕಚೇರಿ ಮುಂದೆ ಹಾಸ್ಟೆಲ್ಗಾಗಿ ಹೋರಾಟ ಮಾಡುತ್ತಿದ್ದಾರೆ.