ವಿಧವೆ ಮೇಲಿನ ಅತ್ಯಾಚಾರ ಆರೋಪ ಹೊತ್ತಿದ್ದ ವ್ಯಕ್ತಿಯ ಎಫ್‌ಐಆರ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ: ದಟ್ಟ ಜನನಿಬಿಡ ಪ್ರದೇಶದಲ್ಲಿ ಇಬ್ಬರು ಮಕ್ಕಳಿರುವ ವಿಧವೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗುವುದನ್ನು ಒಪ್ಪಿಕೊಳ್ಳುವುದು ಕಷ್ಟ ಎಂದು ಗಮನಿಸಿದ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ವ್ಯಕ್ತಿಯೊಬ್ಬನ ವಿರುದ್ಧದ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಮತ್ತು ಅಭಯ್ ವಾಘವಾಸೆ ಅವರ ವಿಭಾಗೀಯ ಪೀಠವು ಪರ್ಭಾನಿ ನಿವಾಸಿಯ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸಿತು. ʻವಾಸ್ತವವಾಗಿ, ಅರ್ಜಿದಾರ ಮತ್ತು ಆರೋಪಿಗಳ ನಡುವೆ ದೀರ್ಘಕಾಲದ ಪರಿಚಯವಿತ್ತು. ದಟ್ಟವಾದ ಜನನಿಬಿಡ ಪ್ರದೇಶದಲ್ಲಿ ವಾಸಿಸುವ ಇಬ್ಬರು ಮಕ್ಕಳೊಂದಿಗೆ ವಿಧವೆಯೊಬ್ಬಳು ಒಮ್ಮೆ ಅಲ್ಲ, ಹಲವಾರು ಸಂದರ್ಭಗಳಲ್ಲಿ ಅತ್ಯಾಚಾರಕ್ಕೊಳಗಾಗಬಹುದು ಎಂದು ಒಪ್ಪಿಕೊಳ್ಳುವುದು ಕಷ್ಟʼ ಎಂದು ಪೀಠ ತಿಳಿಸಿದೆ.
ವಿಧವೆಯೊಬ್ಬರ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪರ್ಭಾನಿಯ ನವ ಮೊಂಧಾ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.
ಇನ್ನೂ, ವ್ಯಕ್ತಿ ಹಾಗೂ ಅರ್ಜಿದಾರರಿಗೆ ಮೊದಲಿಂದಲೂ ಪರಿಚಯವಿತ್ತು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.