ವಿಧಾನ ಪರಿಷತ್ ಚುನಾವಣೆ; ಸ್ಪರ್ಧಿಸಲು ಅರ್ಹತೆಗಳು

ವಿಧಾನ ಪರಿಷತ್ ಚುನಾವಣೆ; ಸ್ಪರ್ಧಿಸಲು ಅರ್ಹತೆಗಳು

ಹಾಸನ, ನವೆಂಬರ್ 12;ಕರ್ನಾಟಕದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದ್ದು, ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ನವೆಂಬರ್ 16 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ನವೆಂಬರ್ 23ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ. ನವೆಂಬರ್ 26ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸ ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. 25 ವರ್ಷ ವಯಸ್ಸಿನವರಾಗಿರಬೇಕು. ಯಾವ ಕ್ಷೇತ್ರದ ಮತದಾರರಾಗಿರುವವರೋ ಆ ಕ್ಷೇತ್ರದ ಮತದಾರರ ಪಟ್ಟಿಯನ್ನು ನಾಮಪತ್ರದೊಂದಿಗೆ ಲಗತ್ತಿಸಬೇಕು.

ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುತ್ತಾರೆ.     

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಠೇವಣಿ ಮೊತ್ತವಾಗಿ 10,000 ರೂ. ಪಾವತಿ ಮಾಡಬೇಕು. ಅನುಸೂಚಿತ ಜಾತಿ ಮತ್ತು ಪಂಗಡದವರ ಆಗಿದ್ದ ಪಕ್ಷದಲ್ಲಿ ತಹಶೀಲ್ದಾರ್ ಮೂಲಕ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಿದ್ದಲ್ಲಿ 5,000 ರೂ. ಠೇವಣಿ ಇಡಬೇಕು.

ಮಾದರಿ ನೀತಿಸಂಹಿತೆಯು ನವೆಂಬರ್ 9 ರಿಂದ ಡಿಸೆಂಬರ್ 16ರ ತನಕ ಜಾರಿಯಲ್ಲಿರುತ್ತದೆ. ಒಟ್ಟು 25 ಸದಸ್ಯರು ನಿವೃತ್ತರಾಗಲಿದ್ದು, ಅವರ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಸಲಾಗುತ್ತಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ.

ನೀತಿ ಸಂಹಿತೆ, ಮತದಾರರು

ಚುನಾವಣಾ ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆಗೆ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕಾಗಿದೆ. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗುತ್ತದೆ.

ಮತದಾರರು; ವಿಧಾನ ಪರಿಷತ್ ಚುನಾವಣೆಯಲ್ಲಿ ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಹೊಂದಿರುತ್ತಾರೆ. ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯವನ್ನು ನಿಗದಿತ ನಮೂನೆಯಲ್ಲಿ ಕೈಗೊಂಡು ಅರ್ಹ ಮತದಾರರ ವಿವರಗಳನ್ನು ಪ್ರಕಟಿಸಲಾಗುತ್ತದೆ.

ಯಾವ-ಯಾವ ಜಿಲ್ಲೆಯಲ್ಲಿ ಚುನಾವಣೆ?

ಒಟ್ಟು 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಬೀದರ್ 1, ಕಲಬುರಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಚಿಕ್ಕಮಗಳೂರು 1, ಹಾಸನ 1, ತುಮಕೂರು 1, ಮಂಡ್ಯ 1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1, ಕೊಡಗು 1, ಮೈಸೂರು 2 ಸ್ಥಾನಗಳಿಗೆ ಚುನಾವಣೆ ಡಿಸೆಂಬರ್ 14ರಂದು ನಡೆಯಲಿದೆ.

ಹಾಸನದಲ್ಲಿ 3590 ಮತದಾರರು

ಚುನಾವಣಾ ಆಯೋಗ ನವೆಂಬರ್ 9ರಂದು ಕರ್ನಾಟಕ ವಿಧಾನ ಪರಿಷತ್ ಚುನಾವಣೆಯನ್ನು ಘೋಷಣೆ ಮಾಡಿದೆ. ಹಾಸನ ಸ್ಥಳೀಯ ಸಂಸ್ಥೆ ಕ್ಷೇತ್ರದ ಚುನಾವಣೆಯೂ ಘೋಷಣೆಯಾಗಿದೆ. ಚುನಾವಣೆಗೆ 3590 ಮತದಾರರಿದ್ದು, 257 ಮತಗಟ್ಟೆಗಳಿವೆ.

ನವೆಂಬರ್ 16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನವೆಂಬರ್ 23ರ ತನಕ (ಸಾರ್ವಜನಿಕ ರಜೆ ದಿನ ಹೊರತುಪಡಿಸಿ ) ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ತನಕ ನಾಮ ಪತ್ರಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ