"ವಿಧಾನಪರಿಷತ್ ರದ್ದು ಕುರಿತಂತೆ ತೀರ್ಮಾನವಾಗಿಲ್ಲ"
ಬೆಳಗಾವಿ,ಡಿ.14- ವಿಧಾನಪರಿಷತ್ ರದ್ದು ಮಾಡುವ ಕುರಿತಂತೆ ಸರ್ಕಾರದಿಂದ ಯಾವುದೇ ತೀರ್ಮಾನವಾಗಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ಅವರು ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರ ಹೇಳಿಕೆಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಬೇಕಿದೆ. ಸಂಪುಟ ಸಭೆಯಲ್ಲಿ ಚರ್ಚೆಯಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ. ಸಂಪುಟ ಸಭೆಗೂ ಮುನ್ನ ಪ್ರಸ್ತಾಪ ಮಾಡಿದ್ದರೆ ಮುಂದೆ ನೀವೇ ಪ್ರಶ್ನೆ ಮಾಡುವಂತಾಗಬಾರದು ಹಾಗಾಗಿ ಪ್ರತಿಕ್ರಿಯಿಸುವುದಿಲ್ಲ ಎಂದರು.