ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನ; ಜನಸಂಕಲ್ಪ ಯಾತ್ರೆ ಮುಂದೂಡಿಕೆ

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನ; ಜನಸಂಕಲ್ಪ ಯಾತ್ರೆ ಮುಂದೂಡಿಕೆ

ಬೆಂಗಳೂರು: ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಹಾಗೂ ಚಿತ್ತಾಪುರದಲ್ಲಿ ಬಿಜೆಪಿ ಇಂದು ಆಯೋಜಿಸಿದ್ದ ಜನಸಂಕಲ್ಪ ಯಾತ್ರೆ ಹಾಗೂ ಸಮಾವೇಶ ಮುಂದೂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದ್ದ ಈ ಯಾತ್ರೆ ಮುಂದೂಡಿಕೆಯಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಯಾತ್ರೆಯ ಸಂಯೋಜಕ ಎನ್.ರವಿಕುಮಾರ್ ತಿಳಿಸಿದ್ದಾರೆ.

ಬಿಎಸ್​​ವೈ ಹಾಗೂ ಬೊಮ್ಮಾಯಿ‌ ಜಂಟಿಯಾಗಿ ಜನಸಂಕಲ್ಪ ಯಾತ್ರೆಯನ್ನು ಕಲ್ಯಾಣ ಕರ್ನಾಟಕದಿಂದ ಆರಂಭಿಸಿದ್ದು, ಈಗಾಗಲೇ ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಯಾತ್ರೆ ಪೂರ್ಣಗೊಳಿಸಿದ್ದು, ಈ ಪ್ರಾಂತದಲ್ಲಿ ಭಾನುವಾರದ ಕಾರ್ಯಕ್ರಮ ಕೊನೆಯದಾಗಿತ್ತು. ದೀಪಾವಳಿ ಹಬ್ಬದ ನಂತರ ಮಧ್ಯ ಕರ್ನಾಟಕದಲ್ಲಿ ಜನಸಂಕಲ್ಪ ಯಾತ್ರೆ ಕೈಗೊಳ್ಳಲು ಉದ್ದೇಶಿಸಿದೆ.