ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆ ಕೋಲಾರದಿಂದ ನಾಲ್ವರು ಗಡಿಪಾರು

ಕೋಲಾರ: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಹೋಗಿದ್ದಾರೆ.
ಈ ನಡುವೆಯೇ ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆ ಮತದಾರರಿಗೆ ಆಮಿಷ ಒಡ್ಡುವ ಸಲುವಾಗಿ ಗಿಫ್ಟ್ ಪಾಲಿಟಿಕ್ಸ್ ಶುರು ಮಾಡಿಕೊಂಡಿದ್ದಾರೆ. ಇದೀಗ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕೋಲಾರ ಜಿಲ್ಲೆಯಿಂದ ನಾಲ್ವರನ್ನು ಗಡಿಪಾರು ಮಾಡಲಾಗಿದೆ. ಇನ್ನು ಹತ್ತು ಜನರ ಗಡಿಪಾರಿಗೆ ಸಿದ್ದತೆ ನಡೆಸಲಾಗಿದೆ ಎಂದು ಕೋಲಾರ ಎಸ್ಪಿ ಎಂ.ನಾರಾಯಣ್ ಮಾಹಿತಿ ನಿಡಿದ್ದಾರೆ.
598 ಜನ ರೌಡಿ ಶೀಟರ್ ಗಳ ಮೇಲೆ ನಿಗಾ ಇಡಲಾಗಿದೆ ಎಂದು ತಿಳಿಸಿದರು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಬಾಂಡ್ ಬರೆಸಿಕೊಳ್ಳಲಾಗಿದ್ದು ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಎಚ್ಚರಿಕೆ ನೀಡಲಾಗಿದೆ.
BIGG NEWS: ಹುಬ್ಬಳ್ಳಿಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ಆಟೋ ಡ್ರೈವರ್ಗಳಿಗೆ ಫ್ಯಾನ್
ಹುಬ್ಬಳ್ಳಿಯಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ಹುಬ್ಬಳ್ಳಿಯಲ್ಲಿ ಆಟೋ ಚಾಲಕರಿಗೆ ಸನ್ಮಾನ ಮಾಡಿ ಫ್ಯಾನ್ ವಿತರಣೆ ಮಾಡಿದ್ದಾರೆ. ತಮ್ಮ ಕಚೇರಿಯಲ್ಲಿ 50ಕ್ಕೂ ಹೆಚ್ಚು ಆಟೋ ಡ್ರೈವರ್ಗಳಿಗೆ ಫ್ಯಾನ್ ವಿತರಿಸಿದ್ದಾರೆ.ಇನ್ನು ಬ್ಯಾಡರಹಳ್ಳಿಯ ಮಹದೇಶ್ವರನಗರ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 12,500 ಕುಕ್ಕರ್ ಹಾಗೂ ಗ್ಯಾಸ್ ಸ್ಟವ್ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.