ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ 'ಯಾತ್ರೆ'ಗೆ ಗ್ರೀನ್ ಸಿಗ್ನಲ್

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ 'ಯಾತ್ರೆ'ಗೆ ಗ್ರೀನ್ ಸಿಗ್ನಲ್

ವದೆಹಲಿ: ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್ ಸಮ್ಮತಿಸಿದೆ.

ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿಂದ ಬಸ್ ಯಾತ್ರೆ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಸಭೆ ನಡೆಸಿ ನಾಯಕರು ದಿನಾಂಕ ನಿಗದಿ ಮಾಡಲಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ವರಿಷ್ಠರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿದ್ಧರಾಮಯ್ಯ, ವಿಷಯಾಧಾರಿತ ಯಾತ್ರೆ ನಡೆಸುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಟ್ರ್ಯಾಕ್ಟರ್ ನಲ್ಲಿ ಯಾತ್ರೆ ಮಾಡಬೇಕೆಂದುಕೊಂಡಿದ್ದೇವೆ. ಮಹದಾಯಿ, ಕೃಷ್ಣಾ ಮೇಲ್ದಂಡೆ, 371 ಜೆ, ಮೇಕೆದಾಟು ಸೇರಿದಂತೆ ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಯಾತ್ರೆ ಮಾಡುತ್ತೇವೆ. ನವೆಂಬರ್ ಒಳಗೆ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ ಎಂದರು.