ವಿಧಾನಸಭೆ ಚುನಾವಣೆಗೆ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ : ಪ್ರಮೋದ್ ಮುತಾಲಿಕ್ ಘೋಷಣೆ

ಉಡುಪಿ : ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳ ಕ್ಷೇತ್ರದಿಂದ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ.
ನಾನು ಬಿಜೆಪಿ, ಬಿಜೆಪಿ ಸಿದ್ಧಾಂತ ವಿರೋಧಿ ಅಲ್ಲ. ಬಿಜೆಪಿಯ ಕೆಲ ವ್ಯಕ್ತಿಗಳು, ಅವರ ತತ್ವ, ಸಿದ್ಧಾಂತದ ವಿರುದ್ಧ ಹೋರಾಟ. ಹಿಂದುತ್ವದ ಪ್ರಮಾಣಿಕತೆ ಇದ್ದರೆ ಬಿಜೆಪಿಯಿಂದ ನನಗೆ ಬೆಂಬಲಿಸಲಿ ಎಂದು ಹೇಳಿದ್ದಾರೆ.