ವಿಧಾನಸಭೆ ಚುನಾವಣೆಗೆ ರಣತಂತ್ರ: ಎಲ್ಲ ಜಿಲ್ಲಾ ಮುಖಂಡರ ಜೊತೆ ಸಭೆ

ವಿಧಾನಸಭೆ ಚುನಾವಣೆಗೆ ರಣತಂತ್ರ: ಎಲ್ಲ ಜಿಲ್ಲಾ ಮುಖಂಡರ ಜೊತೆ ಸಭೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ. ಜಿಲ್ಲಾಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಸಿದ್ಧತೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲೆಗಳ ಮುಖಂಡರುಗಳ ಜೊತೆಗೆ ರಾಜ್ಯ ನಾಯಕರು ಸಭೆ ನಡೆಸುತ್ತಿದ್ದಾರೆ. ಈ ಮೂಲಕ ಚುನಾವಣೆಯಲ್ಲಿ ಎದುರಿಸಲು ರಣತಂತ್ರ ರೂಪಿಸುತ್ತಿದ್ದಾರೆ.ನಗರದ ಹೊರವಲಯದ ಯಲಹಂಕ ಸಮೀಪದ ರೆಸಾರ್ಟ್ ವೊಂದರಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹಮ್ಮದ್ ಹಾಗೂ ಜಿಲ್ಲೆಗಳ ನಾಯಕರು, ಜಿಲ್ಲಾಧ್ಯಕ್ಷರು ಭಾಗಿಯಾಗುತ್ತಿದ್ದಾರೆ.
ಶುಕ್ರವಾರ ಕೋಲಾರ, ಹಾವೇರಿ, ಹುಬ್ಬಳ್ಳಿ- ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಮುಖಂಡರ ಜೊತೆ ರಾಜ್ಯ ನಾಯಕರು ಸಭೆ ನಡೆಸಿದರು.ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.