ವಿಧಾನಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾನೇ: ಭವಾನಿ ರೇವಣ್ಣ

ಹಾಸನ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆಯೇ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.
ಹೀಗಿರುವಾಗಲೇ ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ನಾನೇ ಅಭ್ಯರ್ಥಿಯೆಂದು ಹೇಳಿಕೊಂಡಿದ್ದಾರೆ.
ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಅನುಕೂಲ ಆಗಲಿದೆ. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ ಎಂದರು.