ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಇನ್ನೂ ಕ್ಷೇತ್ರ ಫಿಕ್ಸ್ ಆಗಿಲ್ಲ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಇನ್ನೂ ಕ್ಷೇತ್ರ ಫಿಕ್ಸ್ ಆಗಿಲ್ಲ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕ್ಷೇತ್ರ ಹುಡುಕಾಟದಲ್ಲಿದ್ದು, ಇನ್ನೂ ಅವರಿಗೆ ಕ್ಷೇತ್ರ ಫಿಕ್ಸ್ ಆಗಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯಗೆ ಇನ್ನೂ ಕ್ಷೇತ್ರ ಫಿಕ್ಸ್ ಆಗಿಲ್ಲ.

ಹೀಗಾಗಿ ಇನ್ನೂ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪು ಇತ್ತು. ಈಗ ಮೂರು ಆಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಕೇವಲ ಭಾರತದಲ್ಲಿ ಮಾತ್ರ ಅಭಿಮಾನಿಗಳು ಇಲ್ಲ. ಬೇರೆ ಬೇರೆ ದೇಶಗಳಲ್ಲೂ ಅಭಿಮಾನಿಗಳ ಸಂಖ್ಯೆಯಲ್ಲಿ ಜಾಸ್ತಿಯಾಗಿದೆ. ಈ ಹಿಂದೆ ಅರ್ಜಿ ಹಿಡಿದುಕೊಂಡು ಹೋದವರಿಗೆ ಪ್ರಶಸ್ತಿ ಸಿಗುತ್ತಿತ್ತು. ಮಂತ್ರಿಗಳ ಹಿಂದೆ ತಿರುಗುವವರಿಗೆ ಮಾತ್ರ ಪ್ರಶಸ್ತಿ ಸಿಗುತ್ತಿತ್ತು. ಈಗ ಎಲ್ಲವೂ ಬದಲಾವಣೆ ಆಗಿದೆ ಎಂದರು.