ವಿರುದ್ಧ ದೂರು ನೀಡುತ್ತೇನೆ - ಸಾಮಾಜಿಕ ಕಾರ್ಯಕರ್ತ ಗಂಗರಾಜು

ವಿರುದ್ಧ ದೂರು ನೀಡುತ್ತೇನೆ - ಸಾಮಾಜಿಕ ಕಾರ್ಯಕರ್ತ ಗಂಗರಾಜು

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ.ಡಿ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ರೂಪಾ ತಮ್ಮನ್ನು ನಿಂದಿಸಿದ್ದಾರೆ ಎಂಬುದಾಗಿ ಗುಡುಗಿರುವಂತ ಗಂಗರಾಜು ಅವರು, ಅವರ ವಿರುದ್ಧ ದೂರು ನೀಡೋದಾಗಿ ಹೇಳಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಸಾಮಾಜಿಕ ಕಾರ್ಯಕರ್ತ ಗಂಗರಾಜು ಅವರು, ಕಳೆದ ತಿಂಗಳು 30ರಂದು ರೂಪಾ ನನಗೆ ಪೋನ್ ಮಾಡಿದ್ದರು. ನನ್ನ ಜೊತೆ 25 ನಿಮಿಷ ಮಾತನಾಡಿದ್ದಾರೆ. ರೂಪಾ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ನೀಡುತ್ತೇನೆ ಎಂದರು.

ರೋಹಿಣಿ ಸಿಂಧೂರಿ ಅಕ್ರಮಗಳ ಬಗ್ಗೆ ನನ್ನ ಬಳಿ ಸಾಕಷ್ಟು ದಾಖಲೆ ಇವೆ. ಅವರ ವಿರುದ್ಧ ದೂರು ನೀಡುವಂತೆ ನನಗೆ ರೂಪಾ ಹೇಳಿದ್ದರು. ನಾನು ಅದಕ್ಕೆ ನಿರಾಕರಿಸಿದೆ. ಇದರಿಂದ ಕೋಪಗೊಂಡ ಅವರು ನನ್ನನ್ನು ನಿಂದಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ತಾನು ದೂರು ನೀಡುತ್ತೇನೆ ಎಂದು ಹೇಳಿದರು.

ನಾನು ಅನ್ಯಾಯ ಮಾಡಿದವರ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಆ ಹೋರಾಟ ನಿರಂತರವಾಗಿ ಇರಲಿದೆ. ಹಾಗಂತ ಈಕೆ ಹೇಳಿದ್ದಾರೆಂದು ನಾನು ರೋಹಿಣಿ ಸಿಂಧೂರಿ ವಿರುದ್ಧ ದೂರು ಕೊಡೋದಕ್ಕೆ ಆಗುತ್ತಾ? ಈಕೆ ಹೇಳಿದ್ದಾಳೆ ಎಂದು ಬೇರೆಯವರ ತೇಜೋವಧೆ ಮಾಡೋದಕ್ಕೆ ಆಗೋದಿಲ್ಲ ಎಂಬುದಾಗಿ ಐಪಿಎಸ್ ಅಧಿಕಾರಿ ರೂಪಾ.ಡಿ ವಿರುದ್ಧ ವಾಗ್ಧಾಳಿ ನಡೆಸಿದರು.