: ಪ್ರಿಯಾಂಕಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಹಲ್ಲೆ ಪ್ರಕರಣ

: ಪ್ರಿಯಾಂಕಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಹಲ್ಲೆ ಪ್ರಕರಣ

ಲಕ್ನೋ, ನವೆಂಬರ್ 19: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಪ್ತ ಕಾರ್ಯದರ್ಶಿ ಸಂದೀಪ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ಹಲ್ಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಲಕ್ನೋದ ಹುಸೇಂಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ನಾಲ್ವರು ಆರೋಪಿಗಳು ಮಧ್ಯರಾತ್ರಿ ತನ್ನ ಮನೆಯ ಸುತ್ತಲೂ ಸುತ್ತಾಡುತ್ತಿದ್ದರು. ಇದರಿಂದ ತಮ್ಮ ಖಾಸಗಿತನಕ್ಕೆ ಧಕ್ಕೆ ಆಗಿದೆ ಎಂದು ಆರೋಪಿಸಿ ಪ್ರಶಾಂತ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ.

ಮಧ್ಯರಾತ್ರಿ ವೇಳೆಯಲ್ಲಿ ತಮ್ಮ ಮನೆಯ ಸುತ್ತಲೂ ಸುತ್ತಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪ್ರಶ್ನಿಸಿದಾಗ ತಮ್ಮ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೇ ಬೆದರಿಕೆ ಹಾಕಿದರು ಎಂದು ಆರೋಪಿಸಲಾಗಿದೆ.

ಯಾರು ಆ ನಾಲ್ವರು ಆರೋಪಿಗಳು:

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಪ್ತ ಕಾರ್ಯದರ್ಶಿ ಸಂದೀಪ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು ಹಲ್ಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಆಗಿದೆ. ಈ ನಾಲ್ವರು ಆರೋಪಿಗಳಲ್ಲಿ ಕಾಂಗ್ರೆಸ್ ಮುಖಂಡ ಯೋಗೇಶ್ ಕುಮಾರ್ ದೀಕ್ಷಿತ್ ಮತ್ತು ಶಿವ ಪಾಂಡೆ ಕೂಡ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ಇನ್ನಷ್ಟೇ ಎದುರು ನೋಡಲಾಗುತ್ತಿದೆ.