ವಿರೋಧದ ನಡುವೆಯೂ ರಾಜ್ಯದ ಶಾಲೆಗಳಲ್ಲಿ `ಧ್ಯಾನ ಕ್ಲಾಸ್' ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ
ಬೆಂಗಳೂರು ; ತೀವ್ರ ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಜಾರಿಗೊಳಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಮುಂದಿನ ತಿಂಗಳಿನಿಂದ ಶಾಲೆಗಳಲ್ಲಿ ಧ್ಯಾನ ಕಲಿಸುವ ಯೋಜನೆ ಜಾರಿಯಾಗಲಿದೆ ಎನ್ನಲಾಗಿದೆಶಾಲೆಗಳಲ್ಲಿ ಧ್ಯಾನ ಕಲಿಸಲು ಪತಂಜಲಿ ಯೋಗ ಎಕ್ಸ್ ಪರ್ಟ್ ಗಳ ಸಲಹೆ ಪಡೆಯಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಅಲ್ಲದೇ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರ ಸಲಹೆ ಪಡೆಯಲು ಚಿಂತನೆ ನಡೆಸಲಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಯಾವ ರೀತಿ ಧ್ಯಾನ ಹೇಳಿಕೊಡಬೇಕು? ಎಷ್ಟು ಹೊತ್ತು ಧ್ಯಾನ ಮಾಡಬೇಕು ಎಂಬುದ ರಬಗ್ಗೆ ಸಲಹೆ ಪಡೆಯಲು ನಿರ್ಧರಿಸಲಾಗಿದೆ.ಜಾಗತೀಕರಣ ಫಲವಾಗಿ ವಿದೇಶದ ಮಕ್ಕಳೊಂದಿಗೆ ನಮ್ಮ ಮಕ್ಕಳು ಪೈಪೋಟಿ ನಡೆಸಬೇಕು. ಆ ನಿಟ್ಟಿನಲ್ಲಿ ಅವರ ಬುದ್ಧಿಶಕ್ತಿ ಹೆಚ್ಚಿಸಬೇಕಾಗಿದೆ. ಉತ್ತಮ ದೇಹ, ಮನಸ್ಥಿತಿ ಇದ್ದರೆ ಶಿಕ್ಷಣ ಪಡೆಯಲು ಸಾಧ್ಯ. ಇದಕ್ಕಾಗಿ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಸಿ.ಎಂ. ಬಸವರಾಜ ಬೊಮ್ಮಾಯಿ ತಿಳಿಸಿದ್ದರು