ವಿವಿಧ ಬೇಡಿಕೆ ಆಗ್ರಹಿಸಿ ಮಾ.1ರಿಂದ ಬಿಬಿಎಂಪಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1 ರಿಂದ ಬಿಬಿಎಂಪಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಬಿಬಿಎಂಪಿಯ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ.
ಇದಕ್ಕೆ ಪಾಲಿಕೆ ನೌಕರಸ್ಥರು ಕೂಡ ಸಾಥ್ ನೀಡಲಿದ್ದಾರೆ.
* ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಶೀಘ್ರದಲ್ಲೇ ಪಡೆಯಬೇಕು.
* ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ನೀಡಬೇಕು.
* ಅದು ದಿ.01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು
* ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು.
* ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣೆ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು.
* ಅಧಿಕಾರಿ-ನೌಕರರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ಸೌಲಭ್ಯ, ಚಿಕಿತ್ಸೆ ಪಡೆಯಲು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಬೇಕು