ವಿಶ್ವ ಬೈಸಿಕಲ್ ದಿನ ಮತ್ತು ವಿಶ್ವ ಪರಿಸರ ದಿನ ಜನಜಾಗೃತಿ ಜಾಥಾ ಆಯೋಜನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಸಂಘ ಮತ್ತು ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂದು ಧಾರವಾಡ ಡಿಎಚ್ಓ ಕಾರ್ಯಾಲಯದ ಆವರಣದಲ್ಲಿ 'ಇರುವುದೊಂದೆ ಭೂಮಿ' ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಸುಸ್ಥಿರವಾಗಿ ಬದುಕೋಣ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಬೈಸಿಕಲ್ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ನಡೆಸಿದರು.
ಆರೋಗ್ಯಾಧಿಕಾರಿ ಡಾ.ಬಿ.ಸಿಕರಿಗೌಡರ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಎಲ್ಲ ಜೀವರಾಶಿಗಳಿಗೂ ಪರಿಸರವೇ ಮೂಲಾಧಾರವಾಗಿದೆ. ಪರಿಸರ ಮತ್ತು ಮಾನವ ಇವರೆಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪರಿಸರವನ್ನು ನಾವು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುತ್ತೇವೋ ಹಾಗೆ ಅಷ್ಟು ಸುರಕ್ಷಿತವಾಗಿರಬಹುದು. ಪರಿಸರ ರಕ್ಷಣೆ, ಗಿಡಮರಗಳನ್ನು ನೆಡುವುದು, ಪರಿಸರಕ್ಕೆ ಹಾನಿ ಆಗದ ಹಾಗೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಹಿತಿ ನೀಡಿದರು.
ಜನಜಾಗೃತಿ ಜಾಥಾ ಅಭಿಯಾನವು ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಿಂದ ಪ್ರಾರಂಭವಾಗಿ ಹಳೆಯ ಎಸ್.ಪಿ. ಸರ್ಕಲ್, ಎಲ್.ಇ.ಎ. ಕ್ಯಾಂಟೀನ ರಸ್ತೆ, ಎಚ್.ಡಿ.ಎಂ.ಸಿ ಆಸ್ಪತ್ರೆ, ಶಿವಾಜಿ ಸರ್ಕಲ್, ಬಿ,ಆರ್.ಟಿ.ಎಸ್ ಬಸ್ ಸ್ಟ್ಯಾಂಡ್ ಮತ್ತು ಜ್ಯುಬಿಲಿ ವೃತ್ತ ಮತ್ತಿತರ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು.