ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೂ `CET' : ಉನ್ನತ ಶಿಕ್ಷಣ ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ!

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ಕುರಿತಂತೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರ ನೇತೃತ್ವದಲ್ಲಿ ರಚಿಸಲಾಗಿದ್ದ ಕುಲಪತಿಗಳ ಸಮಿತಿಯು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.ವಿವಿ ಪ್ರಾಧ್ಯಾಪಕರ ನೇಮಕಾತಿಗೆ ಸ್ನಾತಕೋತ್ತರ ಪದವಿ ಜತೆಗೆ ಪಿಎಚ್‌ಡಿ/ಎಂ.ಫಿಲ್ ಮತ್ತು ಎನ್‌ಇಟಿ/ಎಸ್‌ಇಟಿ ಹೊಂದಿದವರು ಸಿಇಟಿಗೆ ಅರ್ಜಿ ಸಲ್ಲಿಸಲು ಅರ್ಹರು. ಪ್ರತಿಯೊಂದು ವಿಷಯಕ್ಕೆ 50 ಅಂಕಗಳ ಸಿಇಟಿ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಥವಾ ಯಾವುದಾದರೂ ಸಕ್ಷಮ ಪ್ರಾಧಿಕಾರ ಈ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.