ವಿಶ್ವಸಂಸ್ಥೆ: ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಜೈಶಂಕರ್ -ಗುಟೆರಸ್

ವಿಶ್ವಸಂಸ್ಥೆ: ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಲಾಗಿದೆ.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.ಜೈಶಂಕರ್ ಮತ್ತು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಗುಟೆರಸ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.ವಿಶ್ವಸಂಸ್ಥೆಯ ಉತ್ತರ ಲಾನ್ ಗಾರ್ಡನ್ಸ್‌ನಲ್ಲಿ ಶಾಶ್ವತವಾಗಿ ನೆಲೆಗೊಂಡಿರುವ ಗಾಂಧೀಜಿಯವರ ಮೊದಲ ಪ್ರತಿಮೆ ಇದಾಗಿದೆ.