'ವೀರ ಕಂಬಳ' ಸಿನಿಮಾದಲ್ಲಿ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ; ಯಾವ ಪಾತ್ರ

'ವೀರ ಕಂಬಳ' ಸಿನಿಮಾದಲ್ಲಿ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ; ಯಾವ ಪಾತ್ರ
ಡಾ.ವೀರೇಂದ್ರ ಹೆಗ್ಗಡೆ ಅವರು 'ವೀರ ಕಂಬಳ' ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಿದ್ದಾರೆ. ಈ ವಿಚಾರ ಕೇಳಿ ಸಿನಿಪ್ರಿಯರು​ ಖುಷಿಪಟ್ಟಿದ್ದಾರೆ.

ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್ ಬಾಬು (S. V. Rajendra Singh Babu ) ಅವರು 'ವೀರ ಕಂಬಳ' ಸಿನಿಮಾ (Veera Kambala) ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಪ್ರಕಾಶ್ ರಾಜ್, ರವಿಶಂಕರ್​ ಸೇರಿ ಅನೇಕ ಅನುಭವಿ ಕಲಾವಿದರು ನಟಿಸುತ್ತಿದ್ದಾರೆ. ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಬಗ್ಗೆ ಈ ಸಿನಿಮಾ ಇದೆ. ಈ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕೂಡ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ಮೇಕಪ್​ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಡಾ. ವೀರೇಂದ್ರ ಹೆಗ್ಗಡೆ ಅವರು 'ವೀರ ಕಂಬಳ' ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಿದ್ದಾರೆ. ಈ ವಿಚಾರ ಕೇಳಿ ಸಿನಿಪ್ರಿಯರು​ ಖುಷಿಪಟ್ಟಿದ್ದಾರೆ. ತುಳುನಾಡಿನ ಸಂಸ್ಕೃತಿಯ ಏಳ್ಗೆಗೆ ಡಾ.ವೀರೇಂದ್ರ ಹೆಗ್ಗಡೆಯವರು ಶ್ರಮಿಸುತ್ತಲೇ ಬಂದಿದ್ದಾರೆ. 'ವೀರ ಕಂಬಳ' ಕೂಡ ತುಳುನಾಡಿನ ಸಂಸ್ಕೃತಿಗೆ ಸಂಬಂಧಿಸಿದ್ದಾಗಿದೆ. ಹೀಗಾಗಿ, ಅವರು ಈ ಚಿತ್ರದಲ್ಲಿ ನಟಿಸಲು ಒಪ್ಪಿದ್ದಾರೆ.

ಡಾ.ವೀರೇಂದ್ರ ಹೆಗ್ಗಡೆಯವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬ ಬಗ್ಗೆ ಚಿತ್ರತಂಡದಿಂದ ಮಾಹಿತಿ ಲಭ್ಯವಾಗಿಲ್ಲ. ಸಿನಿಮಾ ತುಳುನಾಡಿಗೆ ಸಂಬಂಧಿಸಿದ್ದಾಗಿದ್ದರಿಂದ ಅವರು ಧರ್ಮಸ್ಥಳದ ಧರ್ಮಾಧಿಕಾರಿಯಾಗಿಯೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.