ಫಾರ್ಮ್ ಕಳೆದುಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಪದೇ ಪದೇ ಅವಕಾಶ ನೀಡುತ್ತಿರುವುದಕ್ಕೆ ಕನ್ನಡದವರೇ ಆದ ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಅವರ ತೀವ್ರ ಟೀಕೆಯ ನಡುವೆ ದೆಹಲಿಯ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಾಹುಲ್ ಪರ ಮಾತನಾಡಿದ್ದಾರೆ. ಮುಂಬೈ: ಫಾರ್ಮ್ ಕಳೆದುಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಪದೇ ಪದೇ ಅವಕಾಶ ನೀಡುತ್ತಿರುವುದಕ್ಕೆ ಕನ್ನಡದವರೇ ಆದ ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಅವರ ತೀವ್ರ ಟೀಕೆಯ ನಡುವೆ ದೆಹಲಿಯ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಾಹುಲ್ ಪರ ಮಾತನಾಡಿದ್ದಾರೆ.
ಕೆಲವೊಮ್ಮೆ ನಾವು ಪ್ರತಿಭೆಗಳನ್ನು ಬೆಂಬಲಿಸಬೇಕಾಗುತ್ತದೆ. ಕೆ.ಎಲ್. ರಾಹುಲ್ ಅವರನ್ನು ಬೆಂಬಲಿಸಿದ ರೋಹಿತ್ ಶರ್ಮಾ ಅವರನ್ನು ಪ್ರಶಂಸಿಸುತ್ತೇನೆ. ಅವರ ವೃತ್ತಿಜೀವನವೂ ಆರಂಭದಲ್ಲಿ ಇದೇ ರೀತಿ ಇತ್ತು.
ಈಗ ರೋಹಿತ್ ಶರ್ಮಾ ಎಂತಹ ಆಟಗಾರರಾಗಿದ್ದಾರೆ ಎಂಬುದನ್ನು ನೋಡಬಹುದು ಎಂದು ಅವರು ಎಎನ್ ಐ ಸಂದರ್ಶನದಲ್ಲಿ ಹೇಳಿದ್ದಾರೆ.