ವೈದ್ಯಕೀಯ ವೆಚ್ಚಕ್ಕೆ ಸರ್ಕಾರದಿಂದ ಮೋದಿ ಹಣ ತೆಗೆದುಕೊಂಡಿಲ್ಲ

ವೈದ್ಯಕೀಯ ವೆಚ್ಚಕ್ಕೆ ಸರ್ಕಾರದಿಂದ ಮೋದಿ ಹಣ ತೆಗೆದುಕೊಂಡಿಲ್ಲ

ಪ್ರಧಾನಿ ನರೇಂದ್ರ ಮೋದಿ 2014ರಿಂದ ಇಲ್ಲಿಯ ತನಕ ತಮ್ಮ ವೈದ್ಯಕೀಯ ವೆಚ್ಚಕ್ಕಾಗಿ ಒಂದು ರೂಪಾಯಿಯನ್ನು ಸರ್ಕಾರದಿಂದ ಪಡೆದಿಲ್ಲ. ಎಲ್ಲಾ ವೆಚ್ಚವನ್ನು ತಾವೇ ಭರಿಸಿದ್ದಾರೆ. ಈ ಕುರಿತು ಪುಣೆ ಮೂಲದ ಸಾಮಾಜಿಕ ಕಾರ್ಯಕರ್ತ ಪ್ರಫುಲ್ಲ ಸರ್ದಾ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಪ್ರಧಾನಿ ಕಾರ್ಯಾಲಯ ಉತ್ತರ ನೀಡಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಿ ಪ್ರವಾಸದಲ್ಲಿ ಆರೋಗ್ಯ ತಪಾಸಣೆ ಸೇರಿದಂತೆ ಎಲ್ಲಾ ವೈದ್ಯಕೀಯ ವೆಚ್ಚವನ್ನು ಮೋದಿಯೇ ಭರಿಸಿದ್ದಾರೆ ಎನ್ನುವ ಅಂಶ ಬಹಿರಂಗವಾಗಿದೆ.