ವೈದ್ಯರ ಇದೆಂಥಾ ಎಡವಟ್ಟು..! ಶಸ್ತ್ರಚಿಕಿತ್ಸೆ ವೇಳೆ ರಕ್ತನಾಳವನ್ನೇ ಕತ್ತರಿಸಿ, ತಾಯಿ ಮಗು ಸಾವು

ವೈದ್ಯರ ಇದೆಂಥಾ ಎಡವಟ್ಟು..! ಶಸ್ತ್ರಚಿಕಿತ್ಸೆ ವೇಳೆ ರಕ್ತನಾಳವನ್ನೇ ಕತ್ತರಿಸಿ, ತಾಯಿ ಮಗು ಸಾವು

ತ್ತರ ಪ್ರದೇಶದ : ಮಾವಾನಾ ಪಟ್ಟಣದ ಪರೀಕ್ಷಿತ್‌ಗಢ ರಸ್ತೆಯಲ್ಲಿರುವ ರತನ್ ನರ್ಸಿಂಗ್ ಹೋಂನಲ್ಲಿ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಕಲಿ ವೈದ್ಯನೊಬ್ಬ ರಕ್ತನಾಳವನ್ನೇ ಕತ್ತರಿಸಿದ್ದು, ಮಹಿಳೆ ಮತ್ತು ಆಕೆಯ ನವಜಾತ ಶಿಶು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

ಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆ ವೇಳೆ ನರ್ಸಿಂಗ್ ಹೋಮ್​ಗೆ ಕರೆತರಲಾಗಿದೆ. ಹೆರಿಗೆ ಸಮಯದಲ್ಲಿ ನಕಲಿ ವೈದ್ಯ ಮಹಿಳೆಯ ರಕ್ತನಾಳಗಳ ಪೈಕಿ ಒಂದನ್ನು ಕತ್ತರಿಸಿದ್ದು ತೀವ್ರ ರಕ್ತಸ್ರಾವವಾಗಿದ್ದು, ತಾಯಿ-ಮಗು ಮೃತಪಟ್ಟಿದ್ದಾರೆ. ಇಬ್ಬರ ಸಾವಿಗೆ ವೈದ್ಯನ ನಿರ್ಲಕ್ಷ್ಯವೇ ಕಾರಣ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಗಲಾಟೆಯ ತೀವ್ರಗೊಳ್ಳುತ್ತಿದ್ದಂತೆ ವೈದ್ಯರು ಮತ್ತು ನರ್ಸಿಂಗ್ ಹೋಂ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕಾಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ, ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾವಾನಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ