ವೋಟರ್ ಐಡಿ ಮಿಸ್ಸಿಂಗ್ ಕೇಸ್; ಎಸ್ಐಟಿ ರಚನೆಗೆ ಹೈಕೋರ್ಟ್ ಸಿಜೆಗೆ ಮೊರೆ
ಬೆಂಗಳೂರು: ರಾಜಕೀಯ ಪಕ್ಷಗಳ ಮೇಲಾಟಕ್ಕೆ ಕಾರಣವಾಗಿರುವ ಬೆಂಗಳೂರಿನ ಮತದಾರರ ಹೆಸರು ಕೈ ಬಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ, ರಾಜಕೀಯ ಪಕ್ಷಗಳ ನಡುವೆ ಆರೋಪ- ಪ್ರತ್ಯಾರೋಪ ಮುಂದುವರಿದಿರುವಂತೆಯೇ ಬೆಂಗಳೂರಿನ ಸಿಟಿಜನ್ಸ್ ರೈಟ್ಸ್ ಫೌಂಡೇಶನ್ (ಸಿಆರ್ಎಫ್) ಪ್ರಕರಣದ ಬಗ್ಗೆ ವಿಶೇಷ ತನಿಖಾ ದಳ ರಚಿಸಿ, ಸಿಜೆ ಸುಪರ್ದಿನಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಲೆ ಅವರಿಗೆ ಪತ್ರ ಬರೆದಿದೆ.