ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ
ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ.
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆ ಆಯೋಗ ತನಿಖಾಧಿಕಾರಿ ನೇಮಕ ಮಾಡಿದ್ದು, ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾನ್ ಅವರನ್ನು ನೇಮಕ ಮಾಡಿದೆ.
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ೬ ಲಕ್ಷಕ್ಕೂ ಅಧಿಕ ಮತದಾರರ ಹೆಸರನ್ನೇ ವೋಟರ್ ಲಿಸ್ಟ್ ನಿಂದ ಡಿಲಿಟ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಈ ಕುರಿತು ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ 6, 69,652 ಮತದಾರರ ಹೆಸರು ಡಿಲಿಟ್ ಆಗಿದೆ. ವೋಟರ್ ಐಡಿ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳೇ ಅಕ್ರಮವೆಸಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತ ಮಿತಿ ಮೀರಿದೆ ಎಂದು ಕಿಡಿಕಾರಿದ್ದಾರೆ.