ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಸಮಗ್ರ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಸಮಗ್ರ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ವೋಟರ್‌ ಐಡಿ ಅಕ್ರಮದ ಬಗ್ಗೆ ಸಮಗ್ರ ತನಿಖೆಗೆ ಸೂಚಿಸುತ್ತೇನೆ. ಕಾಂಗ್ರೆಸ್‌ ನಾಯಕರು ದೂರು ನೀಡಿದರೆ ಸಮ್ರ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್‌ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ.