ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ; ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ

ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ; ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ

ಬೆಂಗಳೂರು: ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಪ್ರತಿಕ್ರಿಯೆ ನೀಡಿದೆ

ಖಾಸಗಿ ಸಂಸ್ಥೆಯಿಂದ ಮತದಾರ ಮಾಹಿತಿ ಸಂಗ್ರಹ ಆರೋಪದ ಮೇಲೆ ಇದೀಗ ಬಿಬಿಎಂಪಿ ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾಗಿರುವುದಾಗಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದಾರೆ.
ಚಿಲುಮೆ ಸಂಸ್ಥೆಗೆ ಜಾಗೃತಿ ಮೂಡಿಸೋದಕ್ಕೆ ಅಷ್ಟೇ ನಾವು ಅನುಮತಿ ಕೊಟ್ಟಿದ್ದೇವೆ. ಡೇಟಾ ಕಲೆಕ್ಟ್ ಮಾಡಿ ಅಂತಾ ಅನುಮತಿ ಕೊಟ್ಟಿರಲಿಲ್ಲ. ಆದರೆ ಡೇಟಾ ಕಲೆಕ್ಟ್ ಮಾಡ್ತಾ ಇದ್ದಾರೆ ಅಂತಾ ದೂರು ದಾಖಲಾಗಿದೆ.

ಹಾಗಾಗಿ ನಾವು ಅವರಿಗೆ ನೀಡಿದ್ದ ಅನುಮತಿಯನ್ನ ಕ್ಯಾನ್ಸಲ್ ಮಾಡಿದ್ದೇವೆ. ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರದಲ್ಲಿ ಶೆ. 26 ಮಾತ್ರ ವೋಟರ್ ಐಡಿ ಆಧಾರ್ ಲಿಂಕ್ ಆಗಿದೆ. ರಾಜ್ಯಾದ್ಯಂತ ಶೇ.60 ವೋಟರ್ ಐಡಿ ಆಧಾರ್ ಲಿಂಕ್ ಆಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ. 26 ಅಗಿದೆ ಅಷ್ಟೇ. ಬಿಬಿಎಂಪಿ ಬಿಎಲ್ ಓ ಗಳು ಮಾಹಿತಿ ಕಲೆ ಹಾಕಿದ್ದಾರೆ. ಚಿಲುಮೆ ಸಂಸ್ಥೆಯವರು ಮಾಹಿತಿ ಕಲೆ ಹಾಕಿದ್ದಾರೆ ಎಂಬ ಆರೋಪ ಬಂದಿದೆ ಎಂದರು.