ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ; ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ; ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಅಕ್ರಮ ಸಂಗ್ರಹ ಆರೋಪದ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದ್ದಾರೆ.

ಸದ್ಯ ಮುಂದಿನ ಹೋರಾಟದ ಕುರಿತಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇತರರು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಇದೇ ವೇಳೆ ರಣದೀಪ್‌ ಸಿಂಗ ಸುರ್ಜೆವಾಲ ಮಾತನಾಡಿದ ಅವರು, ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಚಿಲುಮೆ ಸಂಸ್ಥೆ ವಿರುದ್ಧ ಇನ್ನೂ ಯಾಕೆ ಎಫ್‌ ಐಆರ್‌ ದಾಖಲಿಸಿಲ್ಲ. ರವಿಕುಮಾರ್‌ ಮತ್ತು ಶೃತಿ ವಿರುದ್ಧ ಯಾಕೆ ಎಫ್‌ ಐಆರ್‌ ದಾಖಲಾಗಿಲ್ಲ. ಕಳ್ಳತನದ ಮಾಹಿತಿ ಯಾರಿಗೆ ನೀಡಿದ್ದಾರೆಂದು ಯಾಕೆ ತಿಳಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.