ಶಾಮನೂರು ಶಿವಶಂಕರಪ್ಪ ಪುತ್ರನ ರೈಸ್ ಮಿಲ್ನಲ್ಲಿ 29 ವನ್ಯ ಜೀವಿಗಳು ಪತ್ತೆ
ದಾವಣಗೆರೆ: ಜಿಲ್ಲೆಯ ಮಾಜಿ ಸಚಿವ ಹಾಗೂ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್ ಮೇಲೆ ನಿನ್ನೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಅರಣ್ಯ ವಿಭಾಗದಲ್ಲಿ ಪ್ರತ್ಯೇಕ ಕೇಸ್ ದಾಖಲಾಗಿದೆ.