ಶಾಲಾ ಮಕ್ಕಳ ಮೇಲೆ ಪಾನಮತ್ತನಿಂದ ಮಾರಣಾಂತಿಕ ಹಲ್ಲೆ

ತುಮಕೂರು: ಶಾಲಾ ಮಕ್ಕಳ ಮೇಲೆ ಪಾನಮತ್ತ ವ್ಯಕ್ತಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ವಿಶ್ವಭಾರತಿ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಕೃತ್ಯ ನಡೆದಿದೆ. ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಪುತ್ರ ಭರತ್, ಕುಡಿದ ಮತ್ತಿನಲ್ಲಿ ಮಕ್ಕಳ ಮೇಲೆ ಬೆಲ್ಟ್ & ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಆದರೆ, ಮಕ್ಕಳಿಗೆ ಚಿಕಿತ್ಸೆ ನೀಡದೇ ಆಡಳಿತ ಮಂಡಳಿ ವಿಚಾರ ಮುಚ್ಚಿಟ್ಟಿದೆ ಎಂದು ಪೋಷಕರು ದೂರಿದ್ದಾರೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ