ಶಾಲೆಗೆ ಹೋಗ್ತಾರೆ ಅಂತ 100ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ವಿಷ ಹಾಕಿ ಹತ್ಯೆ!
ಹೆಣ್ಣು ಮಕ್ಕಳು ಶಿಕ್ಷಣ ಪಢಯಬಾರದು ಎಂದು ಕೆಲವರು ವಿಷ ಹಾಕಿ ನೂರಾರು ಮಕ್ಕಳನ್ನು ಹತ್ಯೆ ಮಾಡಲಾಗಿದೆ ಎಂದು ಇರಾನ್ನ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ದಕ್ಷಿಣ ತೆಹ್ರಾನ್ ನ ಕ್ವಾಮ್ ನಗರದಲ್ಲಿ ಕಳೆದ ನವೆಂಬರ್ ನಲ್ಲಿ ಅತೀ ಹೆಚ್ಚಾಗಿ ಹೆಣ್ಣು ಮಕ್ಕಳು ವಿಷ ಸೇವನೆಯಿಂದ ಮೃತಪಟ್ಟಿರುವ ಪ್ರಕರಣಗಳು ದಾಖಲಾಗುತ್ತಿವೆ.
ಇರಾನ್ ಸರಕಾರದ ಉಪ ಸಚಿವ ಯೂನಸ್ ಪನಹಾನಿ ವಿಷ ಹಾಕಿ ಕೆಲವು ಕಿಡಿಗೇಡಿಗಳನ್ನು ಹೆಣ್ಣು ಮಕ್ಕಳನ್ನು ಕೊಲ್ಲುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚೆನ್ನಾಗಿ ಓದಬೇಕು ಎನ್ನುವ ಕ್ವಾಮ್ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳಿಗೆ ವಿಷ ನೀಡಿ ಹತ್ಯೆ ಮಾಡುತ್ತಿರುವುದರಿದ ಕೆಲವು ಶಾಲೆಗಳನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ