ಶಾಲೆಯಲ್ಲೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ದೈಹಿಕ ಶಿಕ್ಷಕ ಅರೆಸ್ಟ್

ಶಾಲೆಯಲ್ಲೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ದೈಹಿಕ ಶಿಕ್ಷಕ ಅರೆಸ್ಟ್

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಹೆಬ್ಬಾಳ ಶಾಲೆಯ ದೈಹಿಕ ಶಿಕ್ಷಕ 50 ವರ್ಷದ ಆಂಜಿನಪ್ಪ ಅವರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಆಂಜಿನಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆಂಜಿನಪ್ಪ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.