ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು
ದಾವಣಗೆರೆ: ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಅಂದಹಾಗೇ ಕೆಲ ದಿನಗಳ ಹಿಂದೆ ಅವರ ತಮ್ಮನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ, ಬಳಿಕ ಕಾಲುವೆಯಲ್ಲಿ ಕಾರಿನ ಸಹಿತ ಶವವಾಗಿ ಪತ್ತೆಯಾಗಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದಂತ ಆರೋಪದಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ