ಶಾಸಕ ಗೋಪಾಲಕೃಷ್ಣ ಇಂದು ಬಿಜೆಪಿಗೆ ಗುಡ್ ಬೈ , ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!

ಶಾಸಕ ಗೋಪಾಲಕೃಷ್ಣ ಇಂದು ಬಿಜೆಪಿಗೆ ಗುಡ್ ಬೈ , ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ( BJP MLA N Y Gopalakrishna ) ಇಂದು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೈ ತಪ್ಪೋ ಭೀತಿ ಎದುರಾಗಿದ್ದು, ಹೀಗಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.

ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿಯನ್ನು ತೊರೆಯಲಿದ್ದಾರೆ . ನಂತರ ಶಿರಸಿಗೆ ತೆರಳಿ ಅಲ್ಲಿ ಸ್ಪೀಕರ್ ಕಾಗೇರಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ನೀಡಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಭೇಟಿಯಾಗಿದ್ದರು ಎನ್ನಲಾಗಿತ್ತು.

ರಾಜ್ಯ ಹಿಂದುಳಿದ ವರ್ಗ'ಗಳ 'ಮೀಸಲಾತಿ ಪ್ರಮಾಣ' ಮರು ವರ್ಗೀಕರಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳಿಗೆ ( Backward Classes ) ಶಿಕ್ಷಣ ಮತ್ತು ಉದ್ಯೋಗದಲ್ಲಿ ( Education and Jobs ) ಕಲ್ಪಿಸಿರುವ ಮೀಸಲಾತಿಯನ್ನು ಮರು ವರ್ಗೀಕರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ನಡವಾಳಿ ಹೊರಡಿಸಿದ್ದು, ರಾಜ್ಯ ಹಿಂದುಳಿದ ವರ್ಗಗಳನ್ನು ಗುರುತಿಸಿ ಪ್ರವರ್ಗ-1, ಪ್ರವರ್ಗ-1ಎ, 2ಬಿ, 3ಎ ಮತ್ 3ಬಿ ಎಂದು ವರ್ಗೀಕರಿಸಿ, ಸದರಿ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಅನುಸಾರ ಪ್ರವರ್ಗಗಳಲ್ಲಿ ಸೇರ್ಪಡೆ ಮಾಡಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ ಎಂಬುದಾಗಿ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಪಂಚಮಸಾಲಿ ವೀರಶೈವ ಲಿಂಗಾಯಿತ, ಒಕ್ಕಲಿಗೆ, ಮರಾಠ ಹಾಗೂ ಇನ್ನಿತರೆ ಸಮುದಾಯಗಳ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳ ಮರು ವರ್ಗೀಕರಣ ಹಾಗೂ ಮೀಸಲಾತಿಯನ್ನು ಹೆಚ್ಚಿಸಲು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿರುತ್ತದೆ. ಸುಮಾರು 20 ವರ್ಷಗ ಕಳೆದರೂ ಆಯೋಗದಿಂದ ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆಯ ಕಾರ್ಯ ಕೈಗೊಂಡಿರುವುದಿಲ್ಲ. ಹೀಗಾಗಿ ಪಟ್ಟಿಯನ್ನು ಪರಿಷ್ಕರಿಸುವ ಹಾಗೂ ಪುನರ್ ವರ್ಗೀಕರಣ ಕೈಗೊಳ್ಳುವ ಅವಶ್ಯವಿರುತ್ತದೆ ಎಂದಿದ್ದಾರೆ.ಹಿಂದುಳಿದ ವರ್ಗಗಳ ಆಯೋಗವು ಮೀಸಲಾತಿಯ ಪಟ್ಟಿಯಲ್ಲಿ ಹೊಸದಾಗಿ ಸೇರಿಸಲು ಹಾಗೂ ವರ್ಗಾಯಿಸಲು ಪಂಚಮಸಾಲಿ, ಲಿಂಗಾಯಿತ, ಮರಾಠ ಹಾಗೂ ಇತರೆ ಸಮುದಾಯವೂ ಸೇರಿದಂತೆ ರಾಜ್ಯ ಒಕ್ಕಲಿಗರ ಸಂಘ ಹಾಗೂ ಇತರೆ ಅನೇಕ ಸಂಘಗಳು ಸಲ್ಲಿಸಿರುವ ಬೇಡಿಕೆಯನ್ನು ಕಾನೂನು, ಸಂವಿಧಾನದ ಮತ್ತು ಸರ್ವೋಚ್ಛ ನ್ಯಾಯಾಲಯ ಇಂತಹ ಪ್ರಕರಣಗಳಲ್ಲಿ ನೀಡಿದ ತೀರ್ಪಿನ ಅಡಿಯಲ್ಲಿ ಪರಿಶೀಲಿಸಬೇಕಾಗಿರುತ್ತದೆ ಎಂದಿದ್ದಾರೆ.