ಶಾಸಕ ತಿಪ್ಪಾರೆಡ್ಡಿ ವಿರುದ್ಧ ಕಮಿಷನ್ ಆರೋಪ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು?

ಬೆಂಗಳೂರು ; ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಕೇಳಿ ಬಂದಿರುವ ಕಮಿಷನ್ ಆರೋಪದ ಕುರಿತಂತೆ ಗೃಹ ಸಚಿವ ಅರಗಜ್ಞಾನೆಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸುಳ್ಳು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಕೇಸ್ ದಾಖಲಾಗಿದೆ.
ಇನ್ನು ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರು ಎಲ್ಲಾ ಕೆಲಸಗಳಲ್ಲೂ ಕಮಿಷನ್ ಕೇಳುತ್ತಾರೆ ಎಂದು ಚಿತ್ರದುರ್ಗದಲ್ಲಿ ಗುತ್ತಿಗೆದಾರರ ಸಂಘ ಆರೋಪಿಸಿ ಆಡಿಯೋವೊಂದನ್ನು ಬಿಡುಗಡೆ ಮಾಡಿತ್ತು.