ಶಾಸಕ 'ನೆಹರೂ ಓಲೇಕಾರ್' ಗೆ ಬಿಗ್ ರಿಲೀಫ್ : 2 ವರ್ಷ ಶಿಕ್ಷೆ ವಿಧಿಸಿದ್ದ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಷೆ
ಬೆಂಗಳೂರು: ಶಾಸಕ ನೆಹರೂ ಓಲೇಕಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 2 ವರ್ಷ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನಕಲಿ ಬಿಲ್ ಪ್ರಕರಣದಲ್ಲಿ ಶಾಸಕ ನೆಹರೂ ಓಲೇಕಾರ್ ಅವರಿಗೆ 2 ವರ್ಷ ಶಿಕ್ಷೆಯನ್ನು ವಿಧಿಸಲಾಗಿತ್ತು.
ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಓಲೇಕಾರ್ ವಿರುದ್ಧ ನಕಲಿ ಬಿಲ್ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ಕೋರ್ಟ್ 2 ವರ್ಷ ಶಿಕ್ಷೆ ವಿಧಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಸುಪ್ರೀಂ ಕೋರ್ಟ್ ತೀರ್ಪಿನಂತೆ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡಲಾಗಿತ್ತು.
ಸುಪ್ರೀಂ ಕೋರ್ಟ್ ತೀರ್ಪಿನಂತೆ ತನ್ನಿಂದ ತಾನೇ ಅನರ್ಹಗೊಳ್ಳುತ್ತಾರೆ. ಶಿಕ್ಷೆಗೆ ತಡೆಯಾಜ್ಞೆ ನೀಡದಂತೆ ಲೋಕಾಯುಕ್ತ ವಕೀಲರು ಹೈಕೋರ್ಟ್ ನ್ಯಾಯಪೀಠವನ್ನು ಮನವಿ ಮಾಡಿದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದಂತ ಹೈಕೋರ್ಟ್ ನ್ಯಾಯಪೀಠವು, ಆದೇಶವನ್ನು ಕಾಯ್ದಿರಿಸಿತ್ತು.
ಕಾಂಗ್ರೆಸ್ ಪಕ್ಷ ಚುನಾವಣೆಗೂ ಮೊದಲೇ ಸೋಲು ಒಪ್ಪಿಕೊಂಡಿದೆ - ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ಕರ್ನಾಟಕದ ಅಸೆಂಬ್ಲಿ ಚುನಾವಣೆಯ ಕಾವು ದಿನೇದಿನೇ ಏರುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸೋಲನ್ನು ಚುಬಾವಣೆ ಎದುರಿಸುವ ಮೊದಲೇ ಒಪ್ಪಿಕೊಂಡತ್ತದೆ ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ರವರು ತಿಳಿಸಿದ್ದಾರೆ.ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆಯನ್ನು ಗಮನಿಸಿದಾಗ ಇದು ಸ್ಪಷ್ಟವಾಗುತ್ತಿದೆ ಎಂದಿರುವ ಅವರು ಕಾಂಗ್ರೆಸ್ ಮುಖಂಡರ ಮೇಲೆ ಐಟಿ, ಇಡಿ ದಾಳಿ ನಡೆಯಲಿದೆ ಎಂಬ ಸುರ್ಜೇವಾಲ ಹೇಳಿಕೆ ಅವರ ಹತಾಶ ಮನೋಭಾವದ ಸ್ಪಷ್ಟ ಪ್ರತೀಕ ಎಂದು ತಿಳಿಸಿದ್ದಾರೆ.
ದೇಶದ ವಿವಿಧ ಕಡೆ ಪ್ರತಿ ಚುನಾವಣೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಸೋಲಿಗೆ ಒಂದಲ್ಲ ಒಂದು ಕಾರಣ ಹುಡುಕುತ್ತದೆ. ಒಮ್ಮೆ ಇವಿಎಂ ಸರಿ ಇಲ್ಲ ಎನ್ನುವುದು, ಚುನಾವಣೆ ಆಯೋಗ ಸರಿ ಇಲ್ಲ ಎನ್ನುವುದು, ಭಾರತದ ಅನೇಕ ಸ್ವಾಯತ್ತ ಸಂಸ್ಥೆಗಳು ಸರಿ ಇಲ್ಲ ಎನ್ನುವ ಕುಂಟು ನೆಪ ಹುಡುಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಸುರ್ಜೇವಾಲಾ ಮತ್ತು ಮುಖಂಡ ಸಿದ್ದರಾಮಯ್ಯನವರ ಹೇಳಿಕೆ ಪ್ರಸ್ತುತ ಚರ್ಚೆಯ ವಿಷಯ. ಅವರ ಹೇಳಿಕೆ ಗಮನಿಸಿದಾಗ ಅವರ ಸೋಲಿನ ಮನಸ್ಥಿತಿ, ದಿಗಿಲು, ಭಯ ಅರ್ಥವಾಗುತ್ತದೆ. ಕೇಂದ್ರವು ವಿವಿಧ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಅವರ ಟೀಕೆಯು ಕಾಂಗ್ರೆಸ್ ಈ ಹಿಂದಿನ ದಿನಗಳಲ್ಲಿ ದೇಶವನ್ನು ಆಳುತ್ತದ್ದ ಸಂದರ್ಭದಲ್ಲಿ ಮಾಡುತ್ತಿದ್ದ ಕುತಂತ್ರವನ್ನು ಅನಾವರಣಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.