ಶಾಸಕ ಬಯ್ಯಾಪುರ ಹುಟ್ಟುಹಬ್ಬಕ್ಕೆ ಸಿದ್ದು, ಡಿಕೆಶಿ ಒಂದೇ ಹೆಲಿಕಾಪ್ಟರ್‌ನಲ್ಲಿ ಆಗಮನ

ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ. ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಬಯ್ಯಾಪುರ ಅವರ ಹುಟ್ಟುಹಬ್ಬದ ಆಚರಣೆ & ಕೈ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಸಿಂಧನೂರು ರಸ್ತೆಯ ಟಿಎಪಿಸಿಎಂಎಸ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದೇ ಹೆಲಿಕಾಪ್ಟರ್‌ನಲ್ಲಿ ಆಗಮಿಸಲಿದ್ದಾರೆ.